ಸಿದ್ದು ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರು

Team Newsnap
2 Min Read
  • ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು
  • ಪ್ರಕರಣದ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೇಳಿದ್ದ ಟಿ.ಜೆ ಅಬ್ರಹಾಂ
  • ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸುಧೀರ್ಘ ಚರ್ಚೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹೆಸರು ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಗವರ್ನರ್​ಗೆ ದೂರು ನೀಡಿದ ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಗವರ್ನರ್ ಅನುಮತಿ ನೀಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೊನೆಗೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ನಂತರ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿಯೇ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಸುಧೀರ್ಘ ಸಮಾಲೋಚನೆ ನಡೆಸಿದ್ದರು. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.

ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಬಂದಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಅಬ್ರಹಾಂ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.

image 18

ಘಟನೆ ಹಿನ್ನೆಲೆ ಏನು ?

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದೆ ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದಾಖಲೆಗಳ ಜೊತೆ ಆರೋಪಿಸಿರುವ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಟ್ಟಿರುವುದು ನಿಜ.

ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗಂಟೆ ಜಾಮೀನು ಸ್ವಾಧೀನ ಮಾಡಿಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.ತುಂಗಭದ್ರಾ ಅಣೆಕಟ್ಟಿನ ಸ್ಟಾಪ್ ಲಾಗ್ ಗೇಟ್ ಸ್ಥಾಪನೆ ಯಶಸ್ವಿ

ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಹೇಳಿದ್ದರು.

Share This Article
Leave a comment