ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಇಬ್ಬರು ಸ್ವಾತಂತ್ರ‍್ಯ ಹೋರಾಟಗಾರರ ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ.
ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಗ್ಗೆ 10:30 ಗಂಟೆಗೆ ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಅವರ ಮನೆಗೆ ತೆರಳಿ ರಾಜ್ಯಪಾಲರು ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ.ಇದನ್ನು ಓದಿ –ಪಿಎಸ್‍ಐ ಅಕ್ರಮ – ಸರ್ಕಾರಿ ನೌಕರರು ಸೇರಿ ಮತ್ತೆ 8 ಅಭ್ಯರ್ಥಿಗಳು ಬಂಧನ
ಅದೇ ದಿನ ಬೆಳಗ್ಗೆ 11-00 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.
ಜಿಲ್ಲಾಡಳಿತದ ಮೂಲಕ ಸ್ವಾತಂತ್ರ‍್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ‍್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿದ್ದಾರೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ