ಕಲಬುರ್ಗಿ: ಮುಂದಿನ ವಾರದಿಂದ ನೆರೆ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ ಹಾಗೂ ಗೋವಾ ರಾಜ್ಯಗಳಿಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಪುನಾರಂಭಿಸಲಾಗುವುದು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಎಲ್ಲಾ ರಾಜ್ಯದ ಸಾರಿಗೆ ಸಚಿವರಿಗೆ ರಾಜ್ಯದ ಬಸ್ ಸಂಚಾರಕ್ಕೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಈಗಾಗಲೇ ಆಂದ್ರಪ್ರದೇಶದ ಸರ್ಕಾರ ಅನುಮತಿ ಕೊಟ್ಟಿದ್ದು, ಶೀಘ್ರದಲ್ಲೇ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ತೆಗೆದುಕೊಂಡಿದ್ದ ಕ್ರಮಗಳಿಂದ ಈಗಾಗಲೇ ರಾಜ್ಯ, ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಅತಿ ಹೆಚ್ಚು ನಷ್ಟಕ್ಕೊಳಗಾಗಿರುವ ಸರ್ಕಾರಿ ಸಂಸ್ಥೆಗಳಲ್ಲಿ ಸಾರಿಗೆ ಸಂಸ್ಥೆ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ನಾಲ್ಕು ನಿಗಮಗಳಿಂದ ದಿನಕ್ಕೆ 1.5 ಕೋಟಿ ರೂ.ಗಳಂತೆ, 2760 ಕೋಟಿ ನಷ್ಟ ಸಂಭವಿಸಿದೆ. ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು