January 24, 2022

Newsnap Kannada

The World at your finger tips!

ಚಿತ್ರೋದ್ಯಮದ ರಕ್ಷಣೆಗೆ ಸರ್ಕಾರ ಬದ್ಧ : ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

Spread the love

ಸಾವಿರಾರು ಜನರಿಗೆ ಅನ್ನ ನೀಡುವ ಉದ್ಯಮ ಚಿತ್ರರಂಗ. ಇದು ನಷ್ಟಕ್ಕೀಡಾಗಬಾರದು. ಇದರ ರಕ್ಷಣೆಗೆ ಕಾಯ್ದೆಗಳನ್ನು ತರಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.


ತಾವು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮಂಗಳವಾರ ಬೆಂಗಳೂರಿನಲ್ಲಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಪೈರಸಿ ತಡೆಗೆ ಸರ್ಕಾರ ಕ್ರಮಕೈಗೊಳ್ಳಬೇಕು ಮತ್ತು ಇದರ ವಿಚಾರಣೆಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಆರಗ ಜ್ಞಾನೇಂದ್ರ ಮಾತನಾಡಿ, ಪೈರಸಿ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.


ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳ ಟಿಕೆಟ್ ದರ ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಚಿತ್ರದ ಚಿತ್ರೀಕರಣಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದೂ ಅವರು ಹೇಳಿದರು.


ಈಗಾಗಲೇ ಸರ್ಕಾರವು ಸೈಬರ್ ಅಪರಾಧ ವಿಭಾಗವನ್ನು ಗಟ್ಟಿಗೊಳಿಸಿದೆ. ಅಧಿಕಾರಿಗಳಿಗೆ ಹೆಚ್ಚಿನ ತರಬೇತಿ ನೀಡುವ ಸಲುವಾಗಿ ಗುಜರಾತ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ೨೦ ಅಧಿಕಾರಿಗಳನ್ನು ತರಬೇತಿಗಾಗಿ ಅಲ್ಲಿಗೆ ಕಳುಹಿಸಲಾಗಿದೆ. ಇನ್ಫೋಸಿಸ್ ಸಂಸ್ಥೆಯ ಸಹಕಾರವೂ ಸರ್ಕಾರಕ್ಕೆ ಇದೆ ಎಂದರು.


ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್, ಕಾರ್ಯದರ್ಶಿ ಎನ್.ಎಂ. ಸುರೇಶ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

error: Content is protected !!