Karnataka

ಸರ್ಕಾರಿ ನೌಕರರು: ಗ್ರೂಪ್-ಸಿ, ಡಿ ವೃಂದದ ಅಧಿಕಾರಿಗಳ ಪತಿ-ಪತ್ನಿ ವರ್ಗಾವಣೆಗೆ ಸರ್ಕಾರ ಹಸಿರು ನಿಶಾನೆ

ರಾಜ್ಯದ ಗ್ರೂಪ್ ಸಿ ಹಾಗೂ ಗ್ರೂಪ್-ಡಿ ವೃಂದದ ಸರ್ಕಾರಿ ನೌಕರರ ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ ಸಿವಿಲ್ ಸೇವಾ ( ಸಾಮಾನ್ಯ ನೇಮಕಾತಿ ) (ತಿದ್ದುಪಡಿ) ನಿಯಮಗಳು 2023 ಎಂದು ಕರೆಯತಕ್ಕದ್ದು ಎಂದು ತಿಳಿಸಿದೆ.

16ಎ ಸೇವೆಯೊಳಗೆ ವರ್ಗಾವಣೆ ಮೂಲಕ ನೇಮಕ ಮಾಡುವುದು ಮತ್ತು ಈ ನಿಯಮಗಳಲ್ಲಿ ಅಥವಾ ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಲಾದ ವಿಶೇಷ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಒಬ್ಬ ಇಲಾಖಾ ಮುಖ್ಯಸ್ಥರು ಸೇವೆಗೆ ಸಂಬಂಧಿಸಿದಂತೆ ಕಾರಣಗಳನ್ನು ಲಿಖಿತದಲ್ಲಿ ದಾಖಲಿಸಿ ಮತ್ತು ಈ ಬಗ್ಗೆ ಸರ್ಕಾರವು ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು, ಪತಿ-ಪತ್ನಿ ಇಬ್ಬರೂ ಸರ್ಕಾರಿ ಸೇವೆಯಲ್ಲಿರುವ ಪ್ರಕರಣಗಳಲ್ಲಿ ಮಾತ್ರ ಗ್ರೂಪ್-ಸಿ ಅಥವಾ ಗ್ರೂಪ್-ಡಿ ಸೇವೆಗೆ ಸೇರಿದ ಒಬ್ಬರು ಸದಸ್ಯರನ್ನು ಮತ್ತು ಈ ನಿಯಮಗಳಡಿ ಪತಿ ಅಥವಾ ಪತ್ನಿ ಇವರಲ್ಲಿ ಯಾರದರೊಬ್ಬರಿಂದ ಕೋರಿಕೆ ಬಂದಲ್ಲಿ, ಹುದ್ದೆಯ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕದಲ್ಲಿನ ಅದೇ ಕೇಡರ್ ನ ಸಮಾನ ಹುದ್ದೆಗೆ ವರ್ಗಾವಣೆಗೆ ಸೂಚಿಸಿದೆ.

  • ಈ ವರ್ಗಾವಣೆಗೆ ಒಬ್ಬ ಸರ್ಕಾರಿ ನೌಕರನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ಕನಿಷ್ಠ 7 ವರ್ಷ ಸೇವೆಯನ್ನು ಪೂರ್ಣಗೊಳಿಸಿರಬೇಕು.
  • ವರ್ಗಾಯಿಸಬೇಕಾದ ಘಟಕ ಅಥವಾ ಸ್ಥಳದಲ್ಲಿ ಮಂಜೂರಾದ ಹುದ್ದೆಯು ಖಾಲಿ ಇರಬೇಕು.

ಅಂತಹ ವರ್ಗಾವಣೆಯನ್ನು ಒಂದು ಕೇಡರ್ ನಿಂದ ಮತ್ತೊಂದು ಕೇಡರಿಗೆ ಮಾಡತಕ್ಕದಲ್ಲ ಎಂಬುದಾಗಿ ಷರತ್ತು ವಿಧಿಸಿದೆ.50 ಸಾವಿರ ಲಂಚ ಸ್ವೀಕಾರ : ಮಡಿಕೇರಿಯ ‘ಡಿಸಿಎಫ್’ ಲೋಕಾಯುಕ್ತ ಬಲೆಗೆ

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024