ರಾಜ್ಯ ಸರ್ಕಾರ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ,
ಅದು ಮುಂದೆ ಹೀಗೆ ಮುಂದುವರೆದರೆ ಸರ್ಕಾರಕ್ಕೆ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಕಂಡು ಬಂದಿರುವುದು ಆತಂಕ ತಂದಿದೆ.1-10 ತರಗತಿಯ ಸರ್ಕಾರಿ ಶಾಲೆಗಳಲ್ಲಿ ಸೋಂಕು ಕಂಡು ಬಂದಿಲ್ಲ. ಇದರಿಂದ ಮಕ್ಕಳಿಗೆ ತೊಂದರೆ ಆಗಿಲ್ಲ ಎಂದರು.
ಕೊರೊನಾ ಪಾಸಿಟೀವ್ ಬಂದ ಮಕ್ಕಳಿಗೆ ಚಿಕಿತ್ಸೆ ಕೊಡಲಾಗಿದೆ ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಳ ಆದ್ರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕೊರೊನಾ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ, ನಾಳೆ, ನಾಡಿದ್ದು, ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡ್ತೇನೆ. ಯಾರೂ ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೋವಿಡ್ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರಲ್ಲ ಅಂತ ವರದಿಗಳು ಬಂದಿವೆ.
ತಜ್ಞರು ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಎಂದಿದ್ದಾರೆ ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮ ಕೈಗೊಂಡು ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸಲು ಬದ್ಧವಾಗಿದ್ದೇವೆ ಎಂದಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ