March 12, 2026

Newsnap Kannada

The World at your finger tips!

ramnagar psi

ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ – ಐಜೂರು ಠಾಣೆಯ PSI ಅಮಾನತು

Spread the love

ರಾಮನಗರ: ವಕೀಲರ ಹೋರಾಟಕ್ಕೆ ಸರ್ಕಾರ ಮಣಿದಿದ್ದು ಐಜೂರು ಠಾಣೆ PSI ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ.

ವಕೀಲರ ಪ್ರತಿಭಟನೆಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮುಜುಗರ ತಪ್ಪಿಸಿಕೊಳ್ಳಲು ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದೆ.

ಅಮಾನತು ಆದೇಶದ ಬಗ್ಗೆ ಇಂದು ಸದನದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ

40 ವಕೀಲರ ವಿರುದ್ಧ ಸುಳ್ಳು ಎಫ್‌ಐಆರ್‌ ದಾಖಲಿಸಿದ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ರಾಮನಗರ ವಕೀಲರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಫಾಲಿ ಎಸ್ ನಾರಿಮನ್ ಇನ್ನಿಲ್ಲ

ಈ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್‌ ಬೆಂಬಲ ನೀಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು.

error: Content is protected !!