ಬಿಹಾರದ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ವೈವಾಹಿಕ ಜೀವನದ ಬಗ್ಗೆ ತಮ್ಮ ಇಲಾಖೆಗಳಿಗೆ ಅಗತ್ಯ ಅನುಮತಿ ಕೊಟ್ಟ ನಂತರವೇ ಎರಡನೇ ಮದುವೆಗೆ ಅರ್ಹರಾಗಬೇಕೆಂದು ನಿರ್ದೇಶಿಸಿದೆ.ಇದನ್ನು ಓದಿ –ಹೂವಿನ ಹಾರ ಬೇಡ : ಕಾರ್ಯಕರ್ತರ ವಿರುದ್ಧ ಸಿದ್ದರಾಮಯ್ಯ ಗರಂ
ಸರ್ಕಾರಿ ಉದ್ಯೋಗಿಗಳು ಎರಡನೇ ಮದುವೆಯಾಗಲು ತಮ್ಮ ಇಲಾಖೆಗಳಿಗೆ ಸೂಚಿಸಿ ಅಗತ್ಯ ಅನುಮತಿಯನ್ನು ಪಡೆದ ನಂತರವೇ ಮುಂದುವರಿಯಬೇಕು ಎಂದು ಬಿಹಾರದ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.
ಅಧಿಸೂಚನೆಯಲ್ಲಿ ಏನಿದೆ?
ಸರ್ಕಾರಿ ನೌಕರನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಎರಡನೇ ಮದುವೆಯಾಗಿ ಸೇವಾ ಅವಧಿಯಲ್ಲಿ ಮರಣಹೊಂದಿದರೆ, ಅವನ ಅಥವಾ ಅವಳ ಎರಡನೇ ಪತ್ನಿ ಅಥವಾ ಪತಿ ಮತ್ತು ಅವರ ಮಕ್ಕಳು ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ಅರ್ಹರಾಗಿರುವುದಿಲ್ಲ. ರಾಜ್ಯ ಸರ್ಕಾರ ಮೊದಲ ಪತ್ನಿಯ ಮಕ್ಕಳಿಗೆ ಆದ್ಯತೆ ನೀಡಲಿದೆ.ಮೆಕ್ಸಿಕೊ: ನೌಕಾಪಡೆಯ 14 ಸಿಬ್ಬಂದಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವು
ಎರಡನೇ ಬಾರಿಗೆ ಮದುವೆಯಾಗಲು ಬಯಸುವ ಸರ್ಕಾರಿ ಉದ್ಯೋಗಿ ಮೊದಲು ಅವನ ಅಥವಾ ಅವಳ ಸಂಗಾತಿಯಿಂದ ಕಾನೂನುಬದ್ಧವಾಗಿ ಪ್ರತ್ಯೇಕವಾದ ದಾಖಲೆಗಳನ್ನು ಸಂಬಂಧಿಸಿದ ಇಲಾಖೆಗೆ ನೀಡಬೇಕು. ಉದ್ಯೋಗಿಯ ಮೊದಲ ಪತ್ನಿ ಅಥವಾ ಪತಿ ವಿರೋಧಿಸಿದರೆ, ಎರಡನೇ ಪತ್ನಿ ಅಥವಾ ಪತಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ನಿರಾಕರಿಸಲಾಗುತ್ತದೆ.
ಈ ಆದೇಶವನ್ನು ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪೊಲೀಸ್ ಮಹಾನಿರ್ದೇಶಕರು(ಡಿಜಿಪಿ), ಡಿಜಿಪಿ ಹೋಮ್ ಗಾರ್ಡ್, ಡಿಜಿಪಿ ಕಾರಾಗೃಹ ಮತ್ತು ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಯನ್ನು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಸೂಚಿಸಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ