ಸರ್ಕಾರದ ‌6ನೇ ಗ್ಯಾರಂಟಿ ಶೀಘ್ರದಲ್ಲೇ ಘೋಷಣೆ : ಲಕ್ಷ್ಮಿ ಹೆಬ್ಬಾಳ್ಕರ್

Team Newsnap
1 Min Read

ರಾಮನಗರ : ಸರ್ಕಾರದ 6ನೇ ಗ್ಯಾರಂಟಿ ಯೋಜನೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಮತ್ತು ಸಿಎಂ, ಡಿಸಿಎಂ ಜೊತೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್‌,6ನೇ ಗ್ಯಾರಂಟಿ ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟ ಸಚಿವೆ ,ಜನರಿಗೆ ನೀರು, ಹಾಲು, ಮಜ್ಜಿಗೆಯ ವ್ಯತ್ತಾಸ ಗೊತ್ತಿದೆ.

ನಮ್ಮ ಗ್ಯಾರಂಟಿಗಳನ್ನ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ.ಸಿಹಿ ಸುದ್ದಿ ನೀಡಿದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್

ರಾಜ್ಯದ ಉದ್ದಗಲಕ್ಕೂ ಶಕ್ತಿ ಯೋಜನೆಯಿಂದ ಮಹಿಳೆಯರು ಓಡಾಡಬಹುದು.ಮಾಗಡಿಯಲ್ಲೇ 51 ಸಾವಿರ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿವೆ. ನಾವು ಅದಾನಿ, ಅಂಬಾನಿಗೆ ಸಹಾಯ ಮಾಡ್ತಿಲ್ಲ. ನಾವು ನಮ್ಮ ಬಡ ಹೆಣ್ಣುಮಕ್ಕಳಿಗೆ ಸಹಾಯ ಮಾಡುತ್ತಿದ್ದೇವೆ ಎಂದರು.

Share This Article
Leave a comment