ರಾಜ್ಯ ಸರ್ಕಾರವು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಸದ್ಯಕ್ಕಂತೂ ಅಂದರೆ ಈ ವರ್ಷವೇ ಮಾಡುವಂತೆ ಕಾಣುತ್ತಿಲ್ಲ. ಮತ್ತಷ್ಟು ಕಾಲ ಮುಂದೂಡಿದೆ.
ಪ೦ಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನ ಸಭೆಯಲ್ಲಿ ಮಂಡಿಸಲಾಗಿದೆ.
ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್, ಕ್ಷೇತ್ರಗಳ ಗಡಿ ಗುರುತಿಸುವಿಕೆಗಾಗಿ ಆಯೋಗ ರಚನೆಯಾಗಲಿದೆ. ನಿವೃತ್ತ ಮುಖ್ಯಕಾರ್ಯದರ್ಶಿ ಅಥವಾ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಆಯೋಗವನ್ನು ಸರ್ಕಾರ ರಚನೆ ಮಾಡಲಿದೆ.
ಇದರಿಂದಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಮತ್ತುಷ್ಟು ವಿಳಂಬವಾಗಲಿದೆ. ಈ ಚುನಾವಣೆಗಳು ವರ್ಷದ ಕೊನೆಯ ವೇಳೆಗೆ ನಡೆಯಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದಂತೂ ದಿಟ. ಕಾರಣ ಅನೇಕ ಕಡೆ ಟಿಕೆಟ್‌ಗಾಗಿ ಆಕಾಂಕ್ಷಿಗಳು ಕಸರತ್ತು ನಡೆಸಿದ್ದರು. ನಾನಾ ಪಕ್ಷಗಳ ಮುಖಂಡರು ತಮ್ಮ ತಮ್ಮ ಸಾಮರ್ಥ್ಯ ತೋರಿಸಲು ಯೋಜನೆಗಳನ್ನು ಹೆಣೆದಿದ್ದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು