November 15, 2024

Newsnap Kannada

The World at your finger tips!

vidansoudha

ಗ್ರಾ.ಪಂ. ಗ್ರಂಥಾಲಯಗಳಲ್ಲಿ ಆಗಸ್ಟ್ ತಿಂಗಳು ಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ : ರಾಜ್ಯ ಸರ್ಕಾರ ಸೂಚನೆ

Spread the love

ರಾಜ್ಯದ ಗ್ರಾಮಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ‘ಓದುವ ಬೆಳಕು’ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಈ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ಗ್ರಂಥಾಲಯಗಳ ನವೀಕರಣ, ಡಿಜಿಟಲೀಕರಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.

ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಗಸ್ಟ್-2023 ಮಾಹೆಯ ಪೂರ್ಣ “ಭಾರತ ಸ್ವಾತಂತ್ರ್ಯ ದಿನಾಚರಣೆ” ಸಂಭ್ರಮೋತ್ಸವವನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಆಚರಿಸಲು ಈ ಕೆಳಗಿನಂತೆ ಚಟುವಟಿಕೆಗಳನ್ನು ಆಯೋಜಿಸಲು ನಿರ್ಧರಿಸಿದೆ.

WhatsApp Image 2023 08 03 at 10.28.30 AM
WhatsApp Image 2023 08 03 at 10.30.01 AM
Copyright © All rights reserved Newsnap | Newsever by AF themes.
error: Content is protected !!