December 22, 2024

Newsnap Kannada

The World at your finger tips!

leave,school,election

Graduate & Teacher Council elections: holiday for school-colleges on June 13

ಪದವೀಧರ, ಶಿಕ್ಷಕರ ಪರಿಷತ್ ಚುನಾವಣೆ: ಜೂ.13ರಂದು ‘ಶಾಲಾ-ಕಾಲೇಜು’ಗಳಿಗೆ ರಜೆ

Spread the love

ರಾಜ್ಯದಲ್ಲಿ ಜೂನ್ 13 ರಂದು 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ

WhatsApp Image 2022 06 10 at 2.08.45 PM

ಇದನ್ನು ಓದಿ –ಬೆಂಗಳೂರಿನಲ್ಲಿ ವಿವಾಹಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ – ​ ಆರೋಪಿ ಎಸ್ಕೇಪ್

ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ

ಮತದಾನ ನಡೆಯಲಿರುವ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ.

ಈ ಚುನಾವಣೆ ಕ್ಷೇತ್ರವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಕಾರ್ಖಾನೆಗಳು, ಸಹಕಾರಿ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾವುಗಳಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕರ ಆದೇಶಿಸಿದೆ.

Copyright © All rights reserved Newsnap | Newsever by AF themes.
error: Content is protected !!