ಇನ್ನು ಮುಂದೆ ಗ್ರಾ ಪಂ ಮಟ್ಟದಲ್ಲೇ ಜನನ – ಮರಣ ಪ್ರಮಾಣ ಪತ್ರಗಳನ್ನು ವಿತರಿಸುವ ಅಧಿಕಾರವನ್ನು ಸರ್ಕಾರ ಗ್ರಾಮೀಣ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿದೆ.
ಮುಂಬರುವ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ, ಪಂಚತಂತ್ರ ತಂತ್ರಾಂಶಕ್ಕೆ ಅಳವಡಿಸಲಾಗುವ ಇ-ಜನನ ತಂತ್ರಾಂಶವನ್ನು ಉಪಯೋಗಿಸಿಕೊಂಡು ಕೇವಲ ವ್ಯಕ್ತಿಯ ಹೆಸರಿನ ಆಧಾರದ ಮೇಲೆ ಜನನ-ಮರಣ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ. ಆದರೆ ಗ್ರಾಮ ಪಂಚಾಯತ್ ನಲ್ಲಿ ಅಳವಡಿಸಲಾಗುವ ಹೊಸ ತಂತ್ರಾಂಶಕ್ಕೆ ಯಾವುದೇ ಹೊಸ ಜನನ ಅಥವಾ ಮರಣದ ನೋಂದಣಿ ಮತ್ತು ಜನನ-ಮರಣ ಪ್ರಮಾಣ ಪತ್ರಗಳ ತಿದ್ದುಪಡಿಯ ಕ್ರಿಯೆಗೆ ಪ್ರವೇಶವಿರುವದಿಲ್ಲ. ಹೊಸ ನೋಂದಣಿ ಅಥವಾ ತಿದ್ದುಪಡಿಗೆ ಆಯಾ ತಾಲೂಕಿನ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಬೇಕೆಂದು ಸರ್ಕಾರ ತಿಳಿಸಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು