ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.
ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಸಾಂವಿಧಾನಿಕ ಆದೇಶವನ್ನು ಪಾಲಿಸುವ ಸ್ವತಂತ್ರ ಸಂಸ್ಥೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ ಆಯೋಗ ತನ್ನ ವೇಳಾಪಟ್ಟಿಯ ಪ್ರಕಾರ, ಕೋವಿಡ್ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿರ್ಧಾರ ತೆಗೆದುಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು