ಮೊಮ್ಮಗ ಅಜ್ಜಿಯನ್ನು ಕೊಂದು ಕೊರಿಯನ್ ವೆಬ್ ಸೀರಿಸ್ ಶೈಲಿಯಲ್ಲಿ ದೇಹವನ್ನು ವಿಲೇವಾರಿ ಮಾಡಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅಜ್ಜಿ ಹೆಣ ಕಾರಿನಲ್ಲೇ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದ ಸುಪ್ರೀತ್ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದಾನೆ.
ಕೆಆರ್‌ಎಸ್ ಹಿನ್ನೀರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣ ಭೇದಿಸಿದ ಮೈಸೂರು ಪೊಲೀಸರಿಗೆ, ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಆಘಾತಕಾರಿ ಸಂಗತಿ ಮೈಸೂರು ನಗರದಲ್ಲಿ ಬೆಳಕಿಗೆ ಬಂದಿದೆ.
ಮೇ 28 ರಂದು ಮನೆಯಲ್ಲಿ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕಂಪ್ಲೆಂಟ್ ಜೊತೆಗೆ ಸಾಮ್ಯತೆ ಕಂಡ ಪೊಲೀಸರು ಆರೋಪಿ ಸುಪ್ರೀತ್‌ನನ್ನು ವಿಚಾರಣೆಗೆ ಒಳಪಡಿಸಿದಾಗ, ಅಜ್ಜಿ ಯಾವಾಗಲೂ ಬೈಯುತ್ತಿದ್ದಳು . ಹತ್ಯೆ ಮಾಡಲು ಇದು ಕಾರಣ ಎಂದು ಹೇಳಿಕೆ ನೀಡಿದ್ದಾನೆ.ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರಚಿಸಿದ್ದ ತನಿಖಾ ತಂಡ ಒಂದು ವಾರದಲ್ಲಿ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು