ಶೇ 30 ರಷ್ಟು ಕಮಿಷನ್ ಕೊಟ್ಟರಷ್ಟೇ ಮಠಗಳಿಗೆ ಅನುದಾನ – ದಿಂಗಾಲೇಶ್ವರ ಶ್ರೀ ಹೊಸ ಬಾಂಬ್

Team Newsnap
1 Min Read

ರಾಜ್ಯದಲ್ಲಿ ಕಮಿಷನ್ ದಂಧೆ ಬಗ್ಗೆ ಚರ್ಚೆ ನಡೆಯುತ್ತಿರುವ ವೇಳೆಯಲ್ಲೇ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೊಸ ಬಾಂಬ್ ಹಾಕಿದ್ದಾರೆ.

ಮಠಗಳಿಗೆ ಅನುದಾನ ಬಿಡುಗಡೆ ಆಗಬೇಕು ಎಂದರೆ ನಾವು (ಸ್ವಾಮೀಜಿಗಳೂ )ಶೇ 30 ರಷ್ಟು ಕಮಿಷನ್ ಕೊಡಲೇಬೇಕು ಎಂದು ಹೇಳಿರುವ ಸ್ವಾಮೀಜಿಗಳ ಈ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಮಾತನಾಡಿದ ಸ್ವಾಮೀಜಿ
ಸರ್ಕಾರ ಮಠಗಳಿಗೆ ಕೊಡುವ ಅನುದಾನದಲ್ಲಿ ಶೇ. 30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತದೆ. ಇಲ್ಲದಿದ್ರೆ ಯಾವುದೇ ಕಾಮಗಾರಿಗಳೂ ಆಗುವುದಿಲ್ಲ ಹೀಗಾಗಿ ಇನ್ನಾದರೂ ನಾವು ಜಾಗೃತರಾಗಬೇಕು ಎಂದಿದ್ದಾರೆ.

ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದರೆ ಶೇ 30 ರಷ್ಟು ಕಮಿಷನ್ ಕೊಡಬೇಕು. ಆಗಲೇ ಮಠಗಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

Share This Article
Leave a comment