ಈ ಮೂಲಕ ಪ್ರಧಾನಿ ರೋಡ್ ಶೋನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ರೋಡ್ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್ ವಜಾ ಮಾಡಿದೆ.
ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್ ಶೋಗೆ ಅನುಮತಿ ನಿರಾಕರಿಸುವಂತೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ.ವಿಜಯ್ ಕುಮಾರ್ ಅವರಿದ್ದ ಪೀಠ, ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.
ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ 11.30ರ ವರೆಗೆ ರೋಡ್ ಶೋಗೆ ಅನುಮತಿ ನೀಡಿದೆ
ಬೆಂಗಳೂರಿನ ಪ್ರಮುಖ 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಷೋ ಹಾದು ಹೋಗಲಿದೆ, ಇಲ್ಲಿ ಹಲವು ವಾಣಿಜ್ಯ ಮತ್ತು ಜನವಸತಿ ಪ್ರದೇಶಗಳು ಇವೆ. ರೋಡ್ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸಂಸದ ಪಿ ಸಿ ಮೋಹನ್ ಹೇಳಿದ್ದಾರೆ.ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ರಾಮತೀರ್ಥ ಬಳಿಯ ಹೆಲಿಪ್ಯಾಡ್‌ನಲ್ಲಿ ಬೆಂಕಿ
ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಜನರು ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಉಂಟಾಗುವ ನಷ್ಟವನ್ನು ರಾಜಕೀಯ ಪಕ್ಷಗಳು ತುಂಬಿಕೊಡುವುದಿಲ್ಲ ಎಂದು ವಿವರಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಕಚೇರಿಗೆ ಹೋಗುವವರಿಗೆ ಭಾರಿ ಸಮಸ್ಯೆಯಾಗಲಿದೆ. ಹೀಗಾಗಿ ರೋಡ್ ಶೋ ನಿರ್ಬಂಧಿಸುವಂತೆ ಕೋರಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು