December 22, 2024

Newsnap Kannada

The World at your finger tips!

WhatsApp Image 2022 08 24 at 7.17.11 PM

ಸರ್ಕಾರಿ ನೌಕರರ ವರ್ಗಾವಣೆಗೆ ಗ್ರೀನ್ ಸಿಗ್ನಲ್:ಇಲಾಖೆ ಸಚಿವರಿಗೆ ಜವಾಬ್ದಾರಿ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧ ಸರ್ಕಾರದಿಂದ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನಿಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿವ ಷರತ್ತುಗಳಿಗೆ ಒಳಪಟ್ಟು ವರ್ಗಾವಣೆ ಮಾಡಬಹುದಾಗಿದೆ ಎಂದಿದ್ದಾರೆ.

2023-24ನೇ ಸಾಲಿನ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.ಶೆಟ್ಟರ್ , ಯೋಜನಾ ಆಯೋಗದ ಉಪಾಧ್ಯಕ್ಷ – ಸವದಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ?

ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೆ ಒಳಪಟ್ಟು 2023-24ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ ಜೂನ್ 1 ರಿಂದ. 15 ರವರೆಗೆ ಮಾತ್ರ
ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!