ಷರತ್ತಿನೊಂದಿಗೆ 5 ಮತ್ತು 8 ನೇ ತರಗತಿ ‘ಪಬ್ಲಿಕ್ ಪರೀಕ್ಷೆ’ ನಡೆಸಲು ಹೈಕೋರ್ಟ್ ಅಸ್ತು

Team Newsnap
1 Min Read

ಮಾ 27 ರಿಂದ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ.

5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿತ್ತು

ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಇಂದು ವಿಚಾರಣೆ ನಡೆಸಿದ ಹೈಕೋರ್ಟ್ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಷರತ್ತು ವಿಧಿಸಿ ಹೈಕೋರ್ಟ್ ಒಪ್ಪಿಗೆ ನೀಡಿದೆ

ಷರತ್ತುಗಳು :

10 ದಿನಗಳ ಬಳಿಕ ಪರೀಕ್ಷೆ ನಡೆಸಬೇಕು.

ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ.

ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಡುವಂತಿಲ್ಲ.

ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟ ಮಾಡುವಂತಿಲ್ಲ.

ಶಾಲ ಹಂತದಲ್ಲೇ ಪರೀಕ್ಷೆ ನಡೆಸಬೇಕು.

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದೆ.

ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆದಿದೆ. ಹೈಕೋರ್ಟ್ ನ ವಿಭಾಗೀಯ ಪೀಠವು ಪರೀಕ್ಷೆ ನಡೆಸಲು ಅನುಮತಿ ನೀಡಿದರೆ ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೌಲ್ಯಾಂಕನ ಪರೀಕ್ಷೆ ನಡೆಸಬೇಕಾಗುತ್ತದೆ. ಒಂದು ವೇಳೆ ಅನುಮತಿ ನೀಡದಿದ್ದರೆ, ಮಂಡಳಿ ಪರೀಕ್ಷೆ ಬದಲಾಗಿ ಆಯಾ ಶಾಲಾ ಹಂತದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ.ಚಪ್ಪಲಿಯಲ್ಲಿ 1 ಕೆಜಿ ಚಿನ್ನ ಕಳ್ಳ ಸಾಗಾಣೆ : ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಕಳ್ಳ

Share This Article
Leave a comment