ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಈ ಮೂಲಕ ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಲು ಅವಕಾಶ ಸಿಕ್ಕಂತಾಗಿದೆ.
ಸಚಿವ ಸಂಪುಟ ಸಭೆ ನಂತರ ಸಚಿವ ಸುಧಾಕರ್ ಮಾಹಿತಿ ನೀಡಿ, ಶ್ರೀಗಂಧನೀತಿ-2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಈ ಮೂಲಕ ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದು’ ಎಂದರು.
ಇದನ್ನು ಓದಿ – ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸರ್ಕಾರದ ಆದೇಶ
ಇನ್ನು ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ಇನ್ನು ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಿದ್ದೇವೆ. ಶ‍್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಿದ್ದೇವೆ. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸುತ್ತೇವೆ’ ಎಂದು ಸಚಿವರು ತಿಳಿಸಿದರು.
More Stories
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ