ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ : ಓರ್ವ ಪೊಲೀಸ್​ ಅಧಿಕಾರಿ ಸಾವು

Team Newsnap
0 Min Read

ಉಗ್ರರು ಮತ್ತೆ ಮೆರೆದ ಅಟ್ಟಹಾಸದಿಂದಾಗಿ ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಪ್ರದೇಶದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್​ ಅಧಿಕಾರಿ ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ.

ಪೊಲೀಸ್​ ಸಿಬ್ಬಂದಿ ಹಾಗೂ ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಗಾಯಗೊಂಡವರನ್ನ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರೂ ಸೇರಿದ್ದಾರೆ ಎಂಬ ಮಾಹಿತಿ ಇದೆ..

Share This Article
Leave a comment