ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ಮದುವೆ ಮೆರವಣಿಗೆ ವೇಳೆ ವರ ಖುಷಿಗೆ ಗುಂಡು ಹಾರಿಸಿದ್ದು, ಆ ಗುಂಡು ಆತನ ಸ್ನೇಹಿತನಿಗೆ ತಗುಲಿ ಸಾವನ್ನಪ್ಪಿದ್ದಾರೆ.
ಇದನ್ನು ಓದಿ –ಬೆಳಗಾವಿಯ ರೀನಾ, ಇಬ್ಬರು ಮಕ್ಕಳ ಕೊಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ : ಹೈಕೋರ್ಟ್
ವರನನ್ನು ಮನೀಶ್ ಮಧೇಶಿಯಾ ಎಂದು ಹಾಗೂ ಮೃತ ಸ್ನೇಹಿತನನ್ನು ಬಾಬು ಲಾಲ್ ಯಾದವ್ ಎಂದು ಗುರುತಿಸಲಾಗಿದೆ. ವರ ಮತ್ತು ಮೃತ ಸ್ನೇಹಿತ ಯೋಧನಾಗಿದ್ದು, ಇವರಿಬ್ಬರು ಸ್ನೇಹಿತರು.
ವರ ಮನೀಶ್ ಮಧೇಶಿಯಾ ರಥದಲ್ಲಿ ಮೆರವಣಿಗೆ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾನೆ. ಆ ಗುಂಡು ಸ್ನೇಹಿತ ಬಾಬು ಲಾಲ್ ಯಾದವ್ ಅವರಿಗೆ ತಗುಲಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಂಡು ಹಾರಿಸಿದ ತಕ್ಷಣ, ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದರು ಎಂದು ಸೋನ್ಭದ್ರಾ ಪೊಲೀಸ್ ವರಿಷ್ಠಾಧಿಕಾರಿ ಅಮರೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.
ಸ್ನೇಹಿತ ಬಾಬು ಲಾಲ್ ಕುಟುಂಬದವರು ಈ ಸಂಬಂಧ ವರನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ವರನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ.
ಮದುವೆ ಮತ್ತು ದೇಗುಲ ಸೇರಿದಂತೆ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಲೈಸನ್ಸ್ ಪಡೆದ ಬಂದೂಕುಗಳಿದ್ದರೂ ಸಹ ಸಂಭ್ರಮದಿಂದ ಗುಂಡು ಹಾರಿಸುವುದು ಭಾರತದಲ್ಲಿ ಕ್ರಿಮಿನಲ್ ಅಪರಾಧವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ