ಗೃಹಜ್ಯೋತಿ ಯೋಜನೆ : ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ- ಸಚಿವ ಕೆ.ಜೆ ಜಾರ್ಜ್

Team Newsnap
1 Min Read

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ ಅವರು ‘ ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.

ಬಿಬಿಎಂಪಿ ಯಲ್ಲಿ ಮೇಜರ್ ಸರ್ಜರಿ : 9 ಅಧಿಕಾರಿಗಳ ವರ್ಗಾವಣೆ : ಡಿಸಿಎಂ ಡಿಕೆಶಿ ಆದೇಶ

ಜುಲೈ 26 ಅಥವಾ 27 ರ ಒಳಗೆ ಅಂತಿಮ ಗಡುವು ನೀಡಲಾಗಿದೆ. ಈ ದಿನಾಂಕದೊಳಗೆ ನೀವು ನೋಂದಣಿ ಮಾಡದಿದ್ದರೆ ಎಂದಿನಂತೆ ರೆಗ್ಯೂಲರ್ ಬಿಲ್ ಬರುತ್ತದೆ. ಆದ್ದರಿಂದ ಜುಲೈ 27 ರೊಳಗೆ ಅರ್ಜಿ ಸಲ್ಲಿಸಿ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

Share This Article
Leave a comment