ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದ್ದು, ಜುಲೈ ಹಾಗೂ ಆಗಸ್ಟ್ ತಿಂಗಳ ಬಾಕಿ ಇರುವ ಹಣವನ್ನು ಸಂಪೂರ್ಣವಾಗಿ ಜಮಾ ಮಾಡಲಾಗಿದೆ.
ಪೂರ್ವದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಈ ಎರಡೂ ತಿಂಗಳ ಹಣ ಬರಲಾಗಿರಲಿಲ್ಲ. ಇದೀಗ, ಎರಡು ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ ಮತ್ತು ಆಗಸ್ಟ್ ತಿಂಗಳ 2000 ರೂಪಾಯಿ ಪ್ರತಿ ಫಲಾನುಭವಿಯ ಖಾತೆಗೆ ವರ್ಗಾವಣೆ ಮಾಡಿದ್ದು, ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣವೂ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು