ಸರಣಿ ಟ್ವೀಟ್ ಮಾಡಿರುವ ಹೆಚ್‌ಡಿಕೆ , ರೈತರ ಆತ್ಮಹತ್ಯೆ ಹೆಚ್ಚುತ್ತಿದ್ದರೆ ಕಾಂಗ್ರೆಸ್ ಸರ್ಕಾರ ಮಹಾಘಟಬಂಧನ್ ಕಟ್ಟುವುದರಲ್ಲಿ ನಿರತವಾಗಿದೆ.
ರೈತನ ಬದುಕಿಗೆ ಗ್ಯಾರಂಟಿ ಸರ್ಕಾರದಲ್ಲಿ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ; ಒಂದೆಡೆ ಅನ್ನದಾತರು ಆತ್ಮಹತ್ಯೆಗಳಿಗೆ ಶರಣಾಗುತ್ತಿದ್ದರೆ, ಈ @INCKarnataka ಪಕ್ಷಕ್ಕೆ ಅಧಿಕಾರದ್ದೇ ಆಟ. ಘಟಬಂಧನ್ ಕಟ್ಟುವುದರಲ್ಲಿ ಇರುವ ಆತುರ, ಅನ್ನ ಕೊಡುವ ರೈತನ ಬದುಕು ಕಟ್ಟುವುದರಲ್ಲಿ ಇಲ್ಲ. ಹೀಗಿದೆ ಇವರ ಗ್ಯಾರಂಟಿ ವರಸೆ!! 1/6#ರೈತನ_ಬದುಕಿಗೆ_ಗ್ಯಾರಂಟಿ_ಕೊಡಿ pic.twitter.com/JG2rg8v8GN
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 17, 2023
ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರೆ ಸರ್ಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೇ ತಿಂಗಳು ಕಳೆಯುವ ಮುನ್ನವೇ ರಾಜ್ಯದಲ್ಲಿ ‘ ರೈತರ ಮರಣಮೃದಂಗ ‘ ಶುರುವಾಗಿದೆ.
ಅನ್ನದಾತ ಬಂಧುಗಳಲ್ಲಿ ಹೃದಯಪೂರ್ವಕ ಮನವಿ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, “ದಯಮಾಡಿ ಯಾರೂ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ.ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ನೀಡಿದ ನಾರಾಯಣಮೂರ್ತಿ ದಂಪತಿ
ರಾಜ್ಯ ಸರ್ಕಾರ ಶೀಘ್ರದಲ್ಲಿ ಗಮನ ಹರಿಸಬೇಕೆಂದು ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು