ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕುತ್ತೇವೆ. ಗ್ಯಾರಂಟಿ ಸ್ಕೀಮ್‌ಗಳ ಮಾನದಂಡ ಬಡವರಿಗೆ ಅನ್ವಯಿಸುವುದಿಲ್ಲ. ಆದರೆ ಶ್ರೀಮಂತರಿಗೆ ಮಾನದಂಡ ಹಾಕುತ್ತೇವೆ. ಬಡವರಿಗೆ ಯಾವುದೇ ಮಾನದಂಡ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಜಾರಕಿಹೊಳಿ ಅವರು,ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡೆ ಮಾಡುತ್ತೇವೆ ಎಂದರು.
ನಾನು ಡಿಸಿಎಂ ಸ್ಥಾನದ ಆಂಕಾಕ್ಷಿಯಲ್ಲ. ಆದರೆ ಬೇರೆ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿದರೆ ನಾನು ಸಹ ಬೇಡಿಕೆ ಇಡುತ್ತೇನೆ. ಬೇರೆಯವರು ಕೇಳಿದರೆ ನಾನು ಸಹ ಎಸ್‌ಟಿ ಸಮುದಾಯದಿಂದ ನನಗೆ ಡಿಸಿಎಂ ಸ್ಥಾನ ಕೊಡಿ ಎಂದು ಕೇಳುತ್ತೇನೆ. ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.ಕಾಂಗ್ರೆಸ್ ನೀಡಿರುವ ಗ್ಯಾರೆಂಟಿಗಳನ್ನು ನಂಬಿ ಜನ ಅಧಿಕಾರಕ್ಕೆ ತಂದಿದ್ದಾರೆ: ಎಚ್ ಡಿ ಕೆ
ನಾನು ಸಚಿವ ಸ್ಥಾನದ ಆಕಾಂಕ್ಷಿ. ಜನರಿಗೆ ಹತ್ತಿರ ಇರುವ, ಜನರ ಬಳಿ ಹೋಗುವ ಖಾತೆ ಕೇಳುತ್ತೇನೆ. 15 ಖಾತೆಗಳು ಜನರಿಗೆ ನೇರವಾಗಿ ಹತ್ತಿರ ಇದೆ. ಇದರಲ್ಲಿ ಯಾವುದಾದರೂ ಖಾತೆ ಕೊಡಲಿ. ನಮ್ಮ ಬೆಳಗಾವಿ ಜಿಲ್ಲೆಗೆ ಕನಿಷ್ಠ ಮೂರು ಸಚಿವ ಸ್ಥಾನ ಕೊಡಬೇಕು. ನಮ್ಮ ಜಿಲ್ಲೆಯಲ್ಲಿ 11 ಸ್ಥಾನ ಗೆದ್ದಿದ್ದೇವೆ. 3 ಸಚಿವ ಸ್ಥಾನ ಕೊಡಬೇಕು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು