December 3, 2024

Newsnap Kannada

The World at your finger tips!

shabari malai

ನಿಫಾ ವೈರಸ್​ ಹೆಚ್ಚಳ : ಶಬರಿಮಲೆ ಯಾತ್ರೆಗೆ ಮಾರ್ಗಸೂಚಿ – ಕೇರಳ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Spread the love

ನಿಫಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಶಬರಿಮಲೆ ಯಾತ್ರೆಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕೇರಳ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್​ ನಿರ್ದೇಶನ ನೀಡಿದೆ.

ತಿರುವಾಂಕೂರು ದೇವಸ್ವಂ ಬೋರ್ಡ್ ಕಮಿಷನರ್ ಆರೋಗ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ಇದೇ ವೇಳೆ ಸೂಚನೆ ನೀಡಿದೆ.

ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಮೇಲಿನ ದೇವಾಲಯವು ಪ್ರತಿ ಮಲಯಾಳಂ ತಿಂಗಳಲ್ಲಿ ಐದು ದಿನಗಳವರೆಗೆ ತೆರೆದಿರುತ್ತದೆ.

ಉತ್ತರ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ,ಕೋಯಿಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗರೂಕತೆ ಕೈಗೊಳ್ಳುವಂತೆ ಕೇರಳ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್​ ಸೂಚನೆ ನೀಡಿದೆ.

ಶುಕ್ರವಾರ ಕೋಯಿಕ್ಕೋಡ್‌ನಲ್ಲಿ ನಿಪಾಹ್ ವೈರಸ್‌ನ ಹೊಸ ಪ್ರಕರಣಗಳು ದೃಢಪಟ್ಟಿರುವ ವರದಿಯಾಗಿದೆ. ಸೋಂಕಿತರ ಒಟ್ಟು ಸಂಖ್ಯೆ 6 ಕ್ಕೆ ತಲುಪಿದೆ. ರಾಜ್ಯದಲ್ಲಿ ಇದುವರೆಗೆ ಎರಡು ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿಫಾ ವೈರಸ್​ ನಿಯಂತ್ರಣಕ್ಕಾಗಿ ಸತತವಾಗಿ ನಿಗಾ ಇರಿಸಿದೆ.

ನಿಫಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ, ಕೇರಳದ ಕೋಯಿಕೋಡ್‌ನಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಮುಂದಿನ ಭಾನುವಾರ, ಸೆಪ್ಟೆಂಬರ್ 24 ರವರೆಗೆ ಒಂದು ವಾರದವರೆಗೆ ರಜೆ ಘೋಷಣೆ ಮಾಡಲಾಗಿದೆ. ವಾರವಿಡೀ ಆನ್‌ಲೈನ್ ತರಗತಿಗಳನ್ನು ನಡೆಸುವ ಮೂಲಕ ವ್ಯಾಸಂಗಕ್ಕೆ ಅಡ್ಡಿ ಆಗದಂತೆ ನೋಡಿಕೊಳ್ಳುವಂತೆ ಜಿಲ್ಲಾ ಆಡಳಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.

Copyright © All rights reserved Newsnap | Newsever by AF themes.
error: Content is protected !!