ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ರೌಡಿಶೀಟರ್ ಮೇಲೆ ಶೂಟೌಟ್ ಮಾಡಿ ಬಂಧಿಸಲಾಗಿದೆ.
ಬೆಂಗಳೂರಿನ ಜಿಕೆಡಬ್ಲ್ಯೂ ಲೇಔಟ್ ನಲ್ಲಿ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಇಲಿಕುಟ್ಟಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ, ಬಂಧಿಸಿದ್ದಾರೆ.
ಕಳೆದ ತಿಂಗಳುರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀನಿವಾಸ್ ಎಂಬಾತನ ಕತ್ತಿಗೆ ಮನಬಂದಂತೆ ಲಾಂಗ್ ಬೀಸಿ ಸಂತೋಷ್ ಕೊಲೆ ಮಾಡಿದ್ದ ಪೋಲಿಸರಿಗೆ ಬೇಕಾಗಿದ್ದನು.
ಈ ಪ್ರಕರಣ ಸಂಬಂಧಿಸಿದಂತೆ ಬಂಧನಕ್ಕೆ ತೆರಳಿದಾಗ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಂತೋಷ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ರಾಜಗೋಪಾಲ ನಗರ ಪಿಎಸ್ಐ ಹನುಮಂತ ಹಾದಿಮನಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸಂತೋಷ್ ನನ್ನು ಬಂಧಿಸಿದ್ದಾರೆ.
10 ಪ್ರಕರಣದಲ್ಲಿ ಆರೋಪಿ ಸಂತೋಷ್ ಪೊಲೀಸರಿಗೆ ಬೇಕಾಗಿದ್ದನು.
ಈ ಘಟನೆಯಲ್ಲಿ ಮುಖ್ಯ ಪೇದೆ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ