ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ : ಕರ್ನಲ್ ಸೇರಿ ಮೂವರು ಭದ್ರತಾ ಸಿಬ್ಬಂದಿ ಹುತಾತ್ಮ

Team Newsnap
1 Min Read

ಆನಂತ್ ನಾಗ್ : ಅನಂತ್ ನಾಗ್ ನಲ್ಲಿ ಬುಧವಾರ ನಡೆದ ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಹಿರಿಯ ಅಧಿಕಾರಿಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ ಘಟನೆ ಅನಂತ್ ನಾಗ್ ನಲ್ಲಿ ನಡೆದಿದೆ.

ಭಾರತೀಯ ಸೇನೆಯ ಕರ್ನಲ್ ಮತ್ತು ಮೇಜರ್ ಮತ್ತು ಜೆ &ಕೆ ಪೊಲೀಸ್ ಉಪ ಅಧೀಕ್ಷಕರು ಸಾವನ್ನಪ್ಪಿದ್ದಾರೆ.

ಕೆಲವು ಮಾಧ್ಯಮ ವರದಿಗಳ ಪ್ರಕಾರ, ಹುತಾತ್ಮರಲ್ಲಿ ಒಬ್ಬರನ್ನು ಭಾರತೀಯ ಸೇನೆಯ 19 ರಾಷ್ಟ್ರೀಯ ರೈಫಲ್ ಕರ್ನಲ್ ಮನ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ.

ಭಯೋತ್ಪಾದಕರು ಅಡಗಿದ್ದ ಗಡೋಲ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ. ರಾಜ್ಯದಲ್ಲಿ 151 ತಾಲೂಕುಗಳಲ್ಲಿ ಬರ ಘೋಷಣೆ: ಸಿಎಂಗೆ ಶಿಫಾರಸ್ಸು

ಈ ವೇಳೆ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

Share This Article
Leave a comment