ಅಫ್ಘಾನಿಸ್ತಾನದಿಂದ ತಮ್ಮ ದೇಶಕ್ಕೆ ತೆರಳಲು ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾವಿರಾರು ಮಂದಿ ಸೇರಿದ ಬೆನ್ನಲ್ಲೇ ಜನರನ್ನು ನಿಯಂತ್ರಿಸುವ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಜರುಗಿದೆ.
ಈ ನಡುವೆ ವಿಮಾನ ಏರಿದ್ದ ಇಬ್ಬರು ವಿಮಾನದಿಂದ ಭೀಕರವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ನೂಕುನುಗ್ಗಲನ್ನು ನಿಯಂತ್ರಿಸಲು ಅಮೆರಿಕ ಪಡೆ ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಈ ಮೊದಲು ವರದಿಯಾಗಿತ್ತು.
ಜನರು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೋ ಅಥವಾ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.
ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಸಾವಿರಾರು ಮಂದಿ ಕಾಬೂಲ್ ವಿಮಾನ ನಿಲ್ದಾಣದತ್ತ ದೌಡಾಯಿಸಿದ್ದರು.
ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ಕೆಲವು ವಿಮಾನಗಳಲ್ಲಿ ಜನರು ನೂಕುನುಗ್ಗಲಿನಿಂದ ಮೇಲೇರಲು ಯತ್ನಿಸುತ್ತಿರುವ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೇನೆ ಬಿಡುಗಡೆಗೊಳಿಸಿರುವ ಆದೇಶದ ಪ್ರಕಾರ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಅಲ್ಲದೇ ವೈಮಾನಿಕ ಮಾರ್ಗವನ್ನೂ ಕೂಡಾ ನಿರ್ಬಂಧಿಸಿರುವುದಾಗಿ ತಿಳಿಸಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ