ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ಕಾಳಗ: ಐವರ ಸಾವು – ವಿಮಾನದಿಂದ ಬಿದ್ದು ಇಬ್ಬರ‌ ಸಾವು ?

Team Newsnap
1 Min Read

ಅಫ್ಘಾನಿಸ್ತಾನದಿಂದ ತಮ್ಮ ದೇಶಕ್ಕೆ ತೆರಳಲು ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾವಿರಾರು ಮಂದಿ ಸೇರಿದ ಬೆನ್ನಲ್ಲೇ ಜನರನ್ನು ನಿಯಂತ್ರಿಸುವ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಜರುಗಿದೆ.‌

ಈ ನಡುವೆ ವಿಮಾನ‌ ಏರಿದ್ದ ಇಬ್ಬರು ವಿಮಾನದಿಂದ ಭೀಕರವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ನೂಕುನುಗ್ಗಲನ್ನು ನಿಯಂತ್ರಿಸಲು ಅಮೆರಿಕ ಪಡೆ ಗಾಳಿಯಲ್ಲಿ ಗುಂಡು ಹಾರಿಸಿರುವುದಾಗಿ ಈ ಮೊದಲು ವರದಿಯಾಗಿತ್ತು.

ಜನರು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೋ ಅಥವಾ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ.

ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಸಾವಿರಾರು ಮಂದಿ ಕಾಬೂಲ್ ವಿಮಾನ ನಿಲ್ದಾಣದತ್ತ ದೌಡಾಯಿಸಿದ್ದರು.

ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ಕೆಲವು ವಿಮಾನಗಳಲ್ಲಿ ಜನರು ನೂಕುನುಗ್ಗಲಿನಿಂದ ಮೇಲೇರಲು ಯತ್ನಿಸುತ್ತಿರುವ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೇನೆ ಬಿಡುಗಡೆಗೊಳಿಸಿರುವ ಆದೇಶದ ಪ್ರಕಾರ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಅಲ್ಲದೇ ವೈಮಾನಿಕ ಮಾರ್ಗವನ್ನೂ ಕೂಡಾ ನಿರ್ಬಂಧಿಸಿರುವುದಾಗಿ ತಿಳಿಸಿದೆ.

Share This Article
Leave a comment