ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಪೊಲೀಸ್ ಅಧಿಕಾರಿ ಎಎಸ್ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೇ ಸಚಿವರು ಕೊನೆಯುಸಿರೆಳೆದಿದ್ದಾರೆ.ವಿಷ್ಣುವರ್ಧನ್ ಇಡೀ ಕರುನಾಡು ಮೆಚ್ಚಿದ ಹೃದಯವಂತ – ಸಿಎಂ
ನಬ ಕಿಶೋರ್, ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿದ್ದರು. ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿತ್ತು. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿದ್ದರು.
ಆರೋಪಿ ಗೋಪಾಲ್ ಚಂದ್ರ ದಾಸ್ ನ್ನು ಪೊಲೀಸರು ಬಂಧಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ