ಒಡಿಶಾ ಆರೋಗ್ಯ ಸಚಿವರಿಗೆ ಗುಂಡೇಟು : ಚಿಕಿತ್ಸೆ ಫಲಿಸದೆ ಸಾವು

Team Newsnap
1 Min Read

ಪೊಲೀಸ್ ಎಎಸ್ ಐ ನಿಂದಲೇ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ನಿಧನರಾದರು.

ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದರು.

WhatsApp Image 2023 01 29 at 9.01.27 PM

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೇ ಸಚಿವರು ಕೊನೆಯುಸಿರೆಳೆದಿದ್ದಾರೆ.ವಿಷ್ಣುವರ್ಧನ್ ಇಡೀ ಕರುನಾಡು ‌ಮೆಚ್ಚಿದ ಹೃದಯವಂತ – ಸಿಎಂ

ನಬ ಕಿಶೋರ್, ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರಾಗಿದ್ದರು. ಸಚಿವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿತ್ತು. ನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆ. ಗಂಭೀರವಾಗಿ ಗಾಯಗೊಂಡಿದ್ದರು.
ಆರೋಪಿ ಗೋಪಾಲ್ ಚಂದ್ರ ದಾಸ್ ನ್ನು ಪೊಲೀಸರು ಬಂಧಿಸಿದ್ದಾರೆ.

Share This Article
Leave a comment