ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ – ಸರ್ಕಾರದ ಸಮ್ಮತಿ

Team Newsnap
1 Min Read

ಬೆಂಗಳೂರು :
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ ಅಕ್ರಮದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸುವುದಾಗಿ ಸರ್ಕಾರ ಘೋಷಿಸಿದೆ

ವಿಧಾನ ಪರಿಷತ್‍ನಲ್ಲಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಈ ಘೋಷಣೆ ಮಾಡಿದರು.

ನಿಯಮ 72ರಲ್ಲಿ ಕಾಂಗ್ರೆಸ್‍ನ ಯು.ಬಿ ವೆಂಕಟೇಶ್ ವಿಷಯ ಪ್ರಸ್ತಾಪ ಮಾಡಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮದ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಈಗ ಇರುವ ಆಡಳಿತಾಧಿಕಾರಿಯನ್ನು ಬದಲಾವಣೆ ಮಾಡಬೇಕು. ಈ ಅಕ್ರಮದ ಹಿಂದೆ ಪಟ್ಟ ಭದ್ರ ಹಿತಾಸಕ್ತಿಗಳು ಇದ್ದಾರೆ. ಬ್ಯಾಂಕ್ ಉಳಿಸಲು ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಭಾರಿ ಅಕ್ರಮಗಳ ಹಿನ್ನೆಲೆಯಲ್ಲಿ ಆರ್ ಬಿ ಐ ಈ ಬ್ಯಾಂಕ್ ರದ್ದು ಮಾಡಲು ಪತ್ರ ಬರೆದಿದೆ. ಆದರೆ ಸರ್ಕಾರ ರದ್ದು ಮಾಡದಂತೆ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿದ್ದಾರೆ. ಬ್ಯಾಂಕ್ ದಾಖಲಾತಿಗಳು ಕನ್ನಡದಿಂದ ಇಂಗ್ಲಿಷ್‍ಗೆ ಭಾಷಾಂತರ ಕೆಲಸ ನಡೆಯುತ್ತಿದೆ. ತರ್ಜುಮೆ ಕೆಲಸ ಮುಗಿದ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸುತ್ತೇವೆ. ಸರ್ಕಾರ ಆರ್ ಬಿ ಐ ತನ್ನ ನಿಲುವನ್ನು ತಿಳಿಸಲಿದೆ. ರದ್ದು ಮಾಡದಂತೆ ಮನವಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Share This Article
Leave a comment