ಗುರುರಾಘವೇಂದ್ರ, ವಸಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ : ಸಚಿವ ಎಸ್.ಟಿ. ಎಸ್

Team Newsnap
1 Min Read
Gururaghavendra, Vasishtha Souharda Bank scam to be investigated by CBI: Minister S.T. S ಗುರುರಾಘವೇಂದ್ರ, ವಸಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ : ಸಚಿವ ಎಸ್.ಟಿ. ಎಸ್

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು.

ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಈ ವಿಷಯ ತಿಳಿಸಿ, ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆ, ಸಾಲ ವಸೂಲಾತಿ, ಪುನಶ್ಚೇತನ ಕುರಿತು ಸ್ಥಳೀಯ ಶಾಸಕರು, ವಿಧಾನ ಪರಿಷತ್‌ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದರು.ಮಂಡ್ಯ: XUV 700 ಕಾರಿನ ಆಸೆಗೆ ತೋರಿಸಿ ಲಕ್ಷ ಲಕ್ಷ ರು ಕಳೆದಕೊಂಡ ರೈತ 

ಈ ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಅಕ್ರಮದ ಕುರಿತು ತನಿಖೆ ಆರಂಭವಾಗಿ ಮೂರು ವರ್ಷಗಳಾದರೂ ಸಾಲ ವಸೂಲಾತಿ ಆಗುತ್ತಿಲ್ಲ ಹಾಗೂ ಠೇವಣಿ ಹಣ ಪಾವತಿಯಾಗುತ್ತಿಲ್ಲ. ಈ ಕಾರಣದಿಂದ ತನಿಖೆಯನ್ನು ಸಿಬಿಐಗೆ ವಹಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಠೇವಣಿದಾರರ ಹಿತ ಕಾಪಾಡುವುದು ಸರ್ಕಾರದ ಆದ್ಯತೆ. ಸಾಲ ವಸೂಲಾತಿ ಸಮರ್ಪಕ ನಡೆಯದೇ ಇರುವುದರಿಂದ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವರು ಸರ್ಕಾರವನ್ನು ದೂರುವಂತಾಗಿದೆ. ಈ ಎರಡೂ ಬ್ಯಾಂಕ್‌ಗಳು ಸೇರಿದಂತೆ ಇತರೆ ಯಾವುದೇ ಸಹಕಾರಿ ಸಂಸ್ಥೆಗಳಲ್ಲಿ ಈ ರೀತಿಯ ಅಕ್ರಮ ನಡೆದಿದ್ದರೂ, ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.

ಎರಡೂ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ಹಾಗೂ ಸಾಲ ವಸೂಲಾತಿಯಲ್ಲಿನ ಪ್ರಗತಿ ಕುರಿತು ಅಧಿಕಾರಿಗಳು ಸಭೆಗೆ ವಿವರ ನೀಡಿದರು. ‘ಸಿಬಿಐ ತನಿಖೆಗೆ ವಹಿಸಿದರೆ ಏನು ಸಮಸ್ಯೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, ಈ ಸಂಬಂಧ ಸಂಪುಟ ಸಭೆಗೆ ಮಂಡಿಸಲು ಟಿಪ್ಪಣಿ ಸಿದ್ಧಪಡಿಸುವಂತೆ ಸೂಚಿಸಿದರು.

Share This Article
Leave a comment