ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಗುವಾಹಟಿ-ಬಿಕನೇರ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ಮೂವರು ಸಾವನ್ನಪ್ಪಿದ್ದು 15 ಮಂದಿ ಗಾಯಗೊಂಡ ಘಟನೆ ಜರುಗಿದೆ.
ಅಪಘಾತದಲ್ಲಿ ಮೂವರ ಸಾವಿಗೀಡಾಗಿದ್ದು, ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಗಾಯಗೊಂಡಿದ್ದ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ 30 ಆಂಬುಲೆನ್ಸ್‌ಗಳು ಆಗಮಿಸಿದೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಅಪಘಾತ ಕುರಿತು ಉನ್ನತ ಮಟ್ಟದ ರೈಲ್ವೆ ಆಯುಕ್ತರು ತನಿಖೆಗೆ ಆದೇಶಿಸಿದ್ದಾರೆ.
ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಡಿಜಿ ದೆಹಲಿಯಿಂದ ಅಪಘಾತ ಸ್ಥಳಕ್ಕೆ ತೆರಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ಘೋಷಿಸಲಾಗಿದೆ.
ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಒಂದು ಬೋಗಿ ಮಗುಚಿ ಬಿದ್ದಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಮೂಲಗಳು ತಿಳಿಸಿವೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ