ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್ ಬಾಲಂಗೋಚಿ. ಹೀಗಾಗಿ ತುಮಕೂರಿನಿಂದ ಜೆಡಿಎಸ್ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತಿರುಗೇಟು ನೀಡಿ ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ , ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ತಾಕತ್ತು , ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಪಕ್ಷದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವಾ ಜೆಡಿಎಸ್ ಬಗ್ಗೆ ಮಾತನಾಡುವುದು? ಎಂದು ಪ್ರಶ್ನೆ ಮಾಡಿದ್ದಾರೆ.
ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ಹೆಚ್ಡಿಕೆ ಹೇಳಿದ್ದಾರೆ.
ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಸೆ, ಅವಕಾಶ ಸಿಗದೇನೋ ಅನ್ನುವ ಹತಾಶೆ. ಅಭ್ಯರ್ಥಿಗಳಿಲ್ಲ, ಜೆಡಿಎಸ್ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ. ನಮ್ಮವರನ್ನು ಹೈಜಾಕ್ ಮಾಡಿ ಅವರಿಗೆ ಟಿಕೆಟ್ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ನಿಮ್ಮ ʼಕಂತ್ರಿʼ ರಾಜಕೀಯ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )