ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೇಂದ್ರ ಸಚಿವ ಎಚ್ ಡಿ ಕೆ

Team Newsnap
1 Min Read

ಬೆಂಗಳೂರು : ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶನಿವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಗೆಲುವು ಸಾಧಿಸಿದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದರು.

ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಪರಿಷತ್ ಸದಸ್ಯ ಬೋಜೇಗೌಡರು, ಮಾಜಿ ಎಂಎಲ್‌ಸಿ ಚೌಡರೆಡ್ಡಿ ಉಪಸ್ಥಿತರಿದ್ದರು.ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ರವರಿಂದ ಸ್ಪೋಟಕ ಮಾಹಿತಿ

ಸ್ಪೀಕರ್ ಯು.ಟಿ.ಖಾದರ್ ಅವರು ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

Share This Article
Leave a comment