ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಇದೆ. ಜಲಾಶಯಗಳಿಗೆ ಒಳಹರಿವು ಸಹ ಕಡಿಮೆ ಇದೆ. ಜಲಾಶಯಗಳಲ್ಲಿ ರಾಜ್ಯದ ಅಗತ್ಯಕ್ಕಿಂತ ಅರ್ಧದಷ್ಟು ನೀರು ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ನಮಗೆ 106 ಟಿಎಂಸಿ ನೀರಿನ ಅಗತ್ಯವಿದೆ. ನಮ್ಮ ಜಲಾಶಯಗಳಲ್ಲಿ ಸದ್ಯ 56 ಟಿಎಂಸಿ ನೀರಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಅಲ್ಪ ಪ್ರಮಾಣದ ಮಳೆಯಿಂದಾಗಿ ಸುಮಾರು 25 ಕ್ಯೂಸೆಕ್ ನೀರು ಹರಿದು ಬಂದಿದೆ. ಈಗ ಒಳಹರಿವು ಕಡಿಮೆಯಾಗುತ್ತಿದೆ. ಮುಂದೆ ಮಳೆಯಾಗುವ ಸಾಧ್ಯತೆಯೂ ಇಲ್ಲ ಎಂದು ತಿಳಿಸಿದರು.
ಜಲಾಶಯಗಳಲ್ಲಿ ನೀರಿನ ಕೊರತೆಯಿರುವ ಕಾರಣ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದಿನ ಬೆಳೆ ಬೆಳೆಯಲು ಅವಕಾಶ ನೀಡದಿರುವಂತೆ ಕೃಷಿ ಇಲಾಖೆಗೆ ಸೂಚಿಸಲಾಗಿದೆ. ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಬೇಕು. ಬರ ಘೋಷಣೆ ಮಾಡಲಾಗಿದೆ. ಇದು ಸಂಕಷ್ಟದ ವರ್ಷವಾಗಿದೆ ಎಂದು ಶಿವಕುಮಾರ್ ಹೇಳಿದರು.ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ಸ್ವಾಮಿ ? ಮಂಡ್ಯ ಜಿಲ್ಲಾ ಮಂತ್ರಿ ಪ್ರಶ್ನೆ
ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡಲಿ, ರಾಜ್ಯದ ಹಿತಾಸಕ್ತಿ ಕಾಪಾಡಲು ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ ಎಂದರು.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ