ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ.
ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಿಸುವಂತ ಕಾನೂನು ಜಾರಿಯಾಗಲಿದೆ.
ಈ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನದಂದು ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.
ಈ ವೇಳೆ ಮಾತನಾಡಿದ ಅವರು, ನಾನು ಇಂದು ಮಂಡಿಸುತ್ತಿರುವ ಮೂರು ಮಸೂದೆಗಳಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಮೂಲ ಕಾನೂನು ಸೇರಿದೆ. ಮೊದಲನೆಯದು 1860 ರಲ್ಲಿ ರೂಪುಗೊಂಡ ಭಾರತೀಯ ದಂಡ ಸಂಹಿತೆ, ಎರಡನೆಯದು 1898 ರಲ್ಲಿ ರೂಪುಗೊಂಡ ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಮೂರನೆಯದು 1872 ರಲ್ಲಿ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆ. ಬ್ರಿಟಿಷರು ತಂದ ಈ ಕಾನೂನುಗಳನ್ನು ನಾವು ಇಂದು ಕೊನೆಗೊಳಿಸುತ್ತೇವೆ ಎಂದರು.
ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗಿದೆ. ಈ ಕಾಯ್ದೆಯಲ್ಲಿ ಹಳೇ ಅಂಶಗಳನ್ನು ತೆಗೆದು ಹೊಸ ಅಂಶ ಸೇರಿಸಲಾಗಿದೆ ಎಂದರು.ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೆಎಸ್‍ಎಂಸಿಎ 1 ಕೋಟಿ ರು ದೇಣಿಗೆ
ತಿದ್ದುಪಡಿ ಕಾಯ್ದೆಯಂತೆ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದರೇ ಗಲ್ಲುಶಿಕ್ಷೆ ವಿಧಿಸೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಸಲಾಗುತ್ತದೆ. 20 ವರ್ಷ ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು