ಮಂಡ್ಯದದಲ್ಲಿ ಹನುಮ ಧ್ವಜ ವಿವಾದ : ‘ನಿಷೇಧಾಜ್ಞೆ’ ಜಾರಿ

Team Newsnap
1 Min Read

ಮಂಡ್ಯ : 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಪೊಲೀಸರು ಕೆಳಗಿಳಿಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಪ್ರತಿಭಟನೆಯ ಜೋರಾಗಿದ್ದು, ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ನಂತರ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು .

ಗ್ರಾಮಸ್ಥರು ಧ್ವಜ ತೆರವು ಮಾಡದಂತೆ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು.

ಪೊಲೀಸರು ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ , ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.ಸಿಎಂ “ನಿತೀಶ್ ಕುಮಾರ್” ರಾಜೀನಾಮೆ?

ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ , ಪೊಲೀಸರು 108 ಅಡಿ ಎತ್ತರದಲ್ಲಿದ್ದ ಬೃಹತ್ ಹನುಮ ಧ್ವಜವನ್ನು ಕೆಳಗಿಳಿಸಿದರು.

Share This Article
Leave a comment