ಮೈಸೂರು : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ .
ಆತ್ಮಹತ್ಯೆ ಮಾಡಿಕೊಂಡಿರುವ ಎಚ್.ಎಸ್ ಪರಮೇಶ್ (36 ) ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.
ಭಾನುವಾರ ನಾಡ ಕಛೇರಿಗೆ ತೆರಳಿ ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಎಚ್.ಎಸ್ ಪರಮೇಶ್ ಸಾವನ್ನಪ್ಪಿದ್ದಾರೆ .
ನನ್ನ ಸಾವಿಗೆ ಹುಲ್ಲಹಳ್ಳಿ ನಾಡಕಚೇರಿಯ ಉಪ ತಹಶೀಲ್ದಾರ್ ಎನ್.ಪಿ ಶಿವಕುಮಾರ್ ಅವರೇ ನೇರ ಕಾರಣವಾಗಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಪರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಯಶ್ ಕಟೌಟ್ ಕಟ್ಟುವ ಮುನ್ನ ವಿದ್ಯುತ್ ತಂತಿ ತಗುಲಿ ಮೂವರು ಯುವಕರ ಸಾವು :ಮೂವರಿಗೆ ಗಾಯ
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಸ್ಥಳಾಂತರ ಮಾಡಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ