ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ದುಬಾರಿ ಬೆಲೆಯ ಎರಡು ವಾಚ್ಗಳನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಎರಡು ವಾಚ್ಗಳ ಮೌಲ್ಯ 5 ಕೋಟಿ ರು ಮೌಲ್ಯ ಎಂದು ಹೇಳಲಾಗಿದೆ.
ವಿಶ್ವಕಪ್ನಲ್ಲಿ ಸೋಲನ್ನು ಅನುಭವಿಸಿ ಹಾರ್ದಿಕ್ ಪಾಂಡ್ಯಾ ಹಾಗೂ ಟೀಂ ಇಂಡಿಯಾದ ಕೆಲವು ಆಟಗಾರರು ಭಾನುವಾರ ದೇಶಕ್ಕೆ ವಾಪಸ್ ಆಗಿದ್ದಾರೆ.
ಹಾರ್ದಿಕ್ ಪಾಂಡ್ಯ ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಕಷ್ಟಮ್ಸ್ ಅಧಿಕಾರಿಗಳ, ತಪಾಸಣೆ ಮಾಡಿದ ವೇಳೆ ಪಾಂಡ್ಯರ ಎರಡು ವಾಚ್ಗಳನ್ನು ವಶಕ್ಕೆ ಪಡೆದಿದ್ದಾರೆ.
ವಾಚ್ಗಳನ್ನು ಲಗೇಜ್ನಲ್ಲಿ ಇಟ್ಟುಕೊಂಡಿದ್ದರು. ಲಗೇಜ್ನಲ್ಲಿ ದುಬಾರಿ ಬೆಲೆಯ ವಾಚ್ ಇರುವ ಬಗ್ಗೆ ಮಾಹಿತಿ ನೀಡಿರಲಿಲ್ಲ. ಅಲ್ಲದೇ ಆ ವಾಚ್ಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇರಲಿಲ್ಲ. ಹೀಗಾಗಿ ಎರಡೂ ವಾಚ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಳೆದ ವರ್ಷ ದುಬೈನಲ್ಲಿ ಐಪಿಎಲ್ ಪಂದ್ಯಗಳನ್ನ ಆಡಿ ವಾಪಸ್ ಆದ ಸಂದರ್ಭದಲ್ಲಿ, ಮುಂಬೈ ಏರ್ಪೋರ್ಟ್ನಲ್ಲಿ ಇವರ ಸಹೋದರ ಕೃನಾಲ್ ಪಾಂಡ್ಯರನ್ನ ವಶಕ್ಕೆ ಪಡೆಯಲಾಹಿತ್ತು. ಇವರು ಕೂಡ ಯಾವುದೇ ದಾಖಲೆಗಳಿಲ್ಲದೇ 4 ವಾಚ್ಗಳನ್ನು ದುಬೈನಿಂದ ತಂದಿದ್ದರು.
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
- ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
- ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
- ಉದ್ಯೋಗಿಗಳ ಪಿಎಫ್ ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್
- ಚಳಿಗಾಲದ ಚರ್ಮದ ಆರೈಕೆ ಸಲಹೆಗಳು
- ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
More Stories
ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್