January 14, 2026

Newsnap Kannada

The World at your finger tips!

army crash

ಕಾಕ೯ಳದ ಯುವತಿಯನ್ನು ಮದುವೆಯಾಗಿದ್ದ ಲೆ.ಕರ್ನಲ್ ಹರ್ಜಿಂದರ್ ಸಿಂಗ್

Spread the love

ಸೇನಾ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಅಳಿಯ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಹುತಾತ್ಮರಾಗಿದ್ದಾರೆ ಈಗ ಕಾರ್ಕಳದಲ್ಲಿ ನೀರವ ಮೌನ ಆವರಿಸಿದೆ.

ಹರ್ಜಿಂದರ್ ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿಯಾಗಿದ್ದ ಹರ್ಜಿಂದರ್ ಸಿಂಗ್‍ಗೆ ಕರ್ನಾಟಕಕ್ಕೂ ಅವಿನಾಭವ ಸಂಬಂಧವಿತ್ತು.

ಹರ್ಜಿಂದರ್ ಸಿಂಗ್ ಸುಮಾರು 10 ವರ್ಷಗಳ ಹಿಂದೆ ಸೇನೆಯಲ್ಲಿರುವ ಕಾರ್ಕಳದ ಪ್ರಫುಲ್ಲ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು. ಆಗಾಗ ಕಾರ್ಕಳಕ್ಕೆ ಬರುತ್ತಿದ್ದ ಕರ್ನಲ್ ದಂಪತಿಯನ್ನು ನೆನೆದು ಕಾರ್ಕಳ ಸಾಲ್ಮರದ ಮಿನೇಜಸ್ ಕುಟುಂಬ ಕಣ್ಣೀರಿಡುತ್ತಿದೆ.

ಪ್ರಪುಲ್ಲಾ ಮೊದಲು ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಲಿ ಹರ್ಜಿಂದರ್ ಸಿಂಗ್ ಅವರನ್ನು ಪ್ರೀತಿಸಿ ಮದುವೆ ಆಗಿದ್ದರು. ಇತ್ತೀಚೆಗೆ ಸ್ವಯಂ ನಿವೃತ್ತಿಯನ್ನು ಪಡೆದು ಸೇನಾ ಶಾಲೆಯಲ್ಲೇ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ಪ್ರಪುಲ್ಲಾ ದಂಪತಿ ಕಾರ್ಕಳಕ್ಕೆ ಬಂದಿದ್ದರು. ತುಂಬಾ ಕಾಲ ಇಲ್ಲಿಯೇ ಇದ್ದರು. ತಂದೆ-ತಾಯಿ ಅಕ್ಕಂದಿರ ಜೊತೆ ಚೆನ್ನಾಗಿ ಸಮಯ ಕಳೆದಿದ್ದರು ಎಂದು ಕುಟುಂಬ ಸ್ಮರಿಸಿದೆ

error: Content is protected !!