January 29, 2026

Newsnap Kannada

The World at your finger tips!

IAS , war , IPS

Apologize : Otherwise 1 Crore Rs. Defamation case – Rohini warns Roopa ಕ್ಷಮೆ ಕೇಳಿ : ಇಲ್ಲದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ – ರೂಪಾಗೆ ರೋಹಿಣಿ ಎಚ್ಚರಿಕೆ

ಇಬ್ಬರು ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

Spread the love

ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪ – ಪ್ರತ್ಯಾರೋಪಗಳಿಗೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ. ಸಿಎಂ ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ.

ರೋಹಿಣಿ ಸಿಂಧೂರಿ – ಡಿ. ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ.

ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ.

ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ. ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು.

error: Content is protected !!