ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಗುರುವಾರ ಬೆಳಗ್ಗೆ ಜಿಲ್ಲೆ ಹಲವೆಡೆ ಕ್ಷಿಪ್ರ ದಾಳಿ ನಡೆಸಿದ್ದಾರೆ.
ಶಿವಮೊಗ್ಗಕ್ಕೆ ಎನ್‌ಐಎ ಅಧಿಕಾರಿಗಳು ನಿನ್ನೆ ರಾತ್ರಿ ಬಂದಿಳಿದು ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳಿಂದ ದಾಳಿ ನಡೆದಿದೆ.
ಗುರುವಾರ ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭವಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆ ದಾಳಿ ನಡೆಸಿ ವಿಚಾರಣೆ ಮಾಡಲಾಯಿತು. ಬೆಳಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ಆಗಿದ್ದಾರೆ.
ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧ – ಆರಿಫ್ ಖಾನ್ ಕಿಡಿ
ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಇದುವರೆಗೆ ಒಟ್ಟು 450 ಮಂದಿಯನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು