ರೈತ ಹರೀಶ್ ಅವರ ದ್ವಿತಿಯ ಪುತ್ರ ಹೆಚ್.ಯೋಗೇಶ್ (28) ಆತ್ಮಹತ್ಯೆಗೆ ಶರಣಾದ ಯೋಧ.ಮಾಜಿ ಎಂಎಲ್ ಸಿ ಇಂಡವಾಳು ಹೊನ್ನಪ್ಪ ವಿಧಿವಶ
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜ.4 ರಂದು ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದ ಯೋಗೇಶ್ ಅವರು ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಚೆನ್ನಾಗಿದ್ದರು.
ಮಂಗಳವಾರ ಬೆಳಗ್ಗೆ 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಮನೆಯವರು ಎಷ್ಟು ಕೂಗಿದರೂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಬಾಗಿಲನ್ನು ಒಡೆದು ನೋಡಿದಾಗ ಯೋಗೇಶ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ಯೋಗೇಶ್ 2011 ರಲ್ಲಿ ಹಾಸನದಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಎರಡು ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಕ್ಕಳಿರಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು