ಗೊರೂರಿನ ಹೇಮಾವತಿ ಜಲಾಶಯದ ಬಳಿ ನಡೆದ ಘಟನೆ
ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದ ಯುವತಿ
ಯುವತಿಗಾಗಿ ನಡೆಯುತ್ತಿದೆ ಅಗ್ನಿಶಾಮಕದಳದಿಂದ ಶೋಧಕಾರ್ಯ
ಹಾಸನ:
ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾಸನ ತಾಲ್ಲೂಕಿನ, ಗೊರೂರಿನಲ್ಲಿ ನಡೆದಿದೆ.
ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿ, ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯ (19) ಹನುಮ ಜಯಂತಿ ಹಿನ್ನಲೆಯಲ್ಲಿ ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ನಿತ್ಯ ಆಟವಾಡಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ನಿತ್ಯಳ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು