ಹಾಸನ : ವಿದ್ಯಾರ್ಥಿಗಳ ನಡುವೆ ಮಾರಾಮಾರಿ – ಲಾಠಿ ಬೀಸಿ ನಿಯಂತ್ರಿಸಿದ ಪೊಲೀಸರು

Team Newsnap
1 Min Read

ಹಾಸನ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಗಳ ಗಲಾಟೆಗೆ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ ಲಾಠಿ ಬೀಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿ ಪ್ರತಿನಿಧಿಯ ಚುನಾವಣೆ ನಡೆದಿತ್ತು. ನಿನ್ನೆ ಸಂಜೆ ಚುನಾವಣಾ ಫಲಿತಾಂಶ ಬಂದಿದ್ದು, ಗೆದ್ದವರು ಹಾಗೂ ಸೋತವರ ಬೆಂಗಲಿಗ ಗುಂಪುಗಳ ನಡುವೆ ಗಲಾಟೆ ನಡೆದಿದೆ.ಚಿಕ್ಕಮಗಳೂರಿನ ಬಳಿ ಒಂದೇ ನೇಣಿಗೆ ಕೊರಳೊಡ್ಡಿದ ಯುವ ಪ್ರೇಮಿಗಳು

ವರದಿಗಳ ಪ್ರಕಾರ ಚುನಾವಣೆಯಲ್ಲಿ ಗೆದ್ದಿದ್ದ ಗುಂಪಿನ ವಿದ್ಯಾರ್ಥಿಗಳು ಪೊಲೀಸರ ಅನುಮತಿ ಪಡೆದು ನಗರದಲ್ಲಿ ಮೆರವಣಿಗೆ ಮಾಡಿದ್ದರು. ಈ ವೇಳೆ ಸೋತವರ ಮೇಲೆ ಯುವಕರು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಗಲಾಟೆಯಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.


ಘಟನೆ ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚುನಾವಣೆ ಹೆಸರಿನಲ್ಲಿ ವಿದ್ಯಾರ್ಥಿಗಳು ಪುಂಡಾಟ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

Share This Article
Leave a comment