ಬೆಂಗಳೂರು :
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ.ಈ ತೀರ್ಪು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಹೈಕೋರ್ಟ್ ಶಾಕ್ ನೀಡಿದೆ.
ಆರೋಪ ಏನಿತ್ತು..?
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು. ಈ ವೇಳೆ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಮಾಡಿರುವ ಆರೋಪ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿತ್ತು.
ಆದಾಯ ತೆರಿಗೆ ವಿವರಗಳ ಸಂಬಂಧ ನಕಲಿ ದಾಖಲೆ ಸಲ್ಲಿಸಿರೋ ಗಂಭೀರ ಆರೋಪ ಮಾಡಿದ್ದರು.
ಇನ್ನು, ಪ್ರಜ್ವಲ್ ಆಯ್ಕೆಯನ್ನು ಅಸಿಂಧು ಮಾಡಿ ಎಂದು ಹೈಕೋರ್ಟ್ನಲ್ಲಿ ಎ. ಮಂಜು ಮತ್ತು ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ 6 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡದಂತೆ ಆದೇಶ ಹೊರಡಿಸಿದೆ.